ಕುವೈತ್ ಅಗ್ನಿ ದುರಂತ: ಸಾವನ್ನಪ್ಪಿದ್ದ 45 ಭಾರತೀಯರ ಮೃತದೇಹಗಳು ಕೇರಳಕ್ಕೆ

ನವದೆಹಲಿ:ಎರಡು ದಿನಗಳ ಹಿಂದೆ ಕುವೈತ್‌ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಮೃತದೇಹಗಳನ್ನು ಹೊತ್ತ ವಾಯುಸೇನೆಯ ವಿಶೇಷ ವಿಮಾನ ಕೇರಳಕ್ಕೆ ಬಂದಿಳಿದಿದೆ.

ಮೃತರಲ್ಲಿ ಕೇರಳದ 23, ತಮಿಳುನಾಡಿನ ಏಳು, ಉತ್ತರ ಪ್ರದೇಶದ ಮೂವರು, ಒಡಿಶಾದ ಇಬ್ಬರು ಹಾಗೂ ಬಿಹಾರ, ಪಂಜಾಬ್, ಕರ್ನಾಟಕ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಹರಿಯಾಣದಿಂದ ತಲಾ ಒಬ್ಬರು ಸೇರಿದ್ದಾರೆ ಎಂದು ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡ ಅಧಿಕಾರಿಗಳಿಗೆ ನಾವು ಧನ್ಯವಾದ ತಿಳಿಸುತ್ತೇವೆ. ಪ್ರಧಾನಿ ಮೋದಿ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಕ್ಷಿಪ್ರವಾಗಿ ಕಾರ್ಯೋನ್ಮುಖರಾಗಿದ್ದರು. ಇಂದು ವಿಶೇಷ ವಿಮಾನದಲ್ಲಿ ಮೃತದೇಹಗಳನ್ನು ಭಾರತಕ್ಕೆ ತರಲಾಗಿದೆ ವಿದೇಶಾಂಗ ಸಚಿವಾಲಯ ತಿಳಿಸಿದೆ.

Advertisement

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇಂದ್ರ ಸಚಿವ ಸುರೇಶ್ ಗೋಪಿ, ಮಾಜಿ ಕೇಂದ್ರ ಸಚಿವ ವಿ ಮುರಳೀಧರನ್ ವಿಮಾನ ನಿಲ್ದಾಣದಲ್ಲಿ ಉಪಸ್ಥಿತರಿದ್ದರು.

ಮಂಗಾಫ್ ನಗರದ ಆರು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಅಗ್ನಿ ಅವಘಡದಿಂದ ಕನಿಷ್ಠ 48 ಜನರು ಸಾವನ್ನಪ್ಪಿದ್ದರು. ವಸತಿ ಕಟ್ಟಡದಲ್ಲಿದ್ದ 176 ಭಾರತೀಯ ಕಾರ್ಮಿಕರಲ್ಲಿ 45 ಮಂದಿ ಮೃತಪಟ್ಟಿದ್ದರು. 33 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಯಭಾರ ಕಚೇರಿ ತಿಳಿಸಿದೆ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement