ಒಟ್ಟಾವಾ: ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಭಾರತೀಯರು ಮೃತಪಟ್ಟಿದ್ದಾರೆ. ಈ ಘಟನೆ ಗುರುವಾರ (ಅಕ್ಟೋಬರ್ 24) ಮಧ್ಯರಾತ್ರಿ ಕೆನಡಾದ ಟೊರೊಂಟೊ ಪೋರ್ಟ್ ಲ್ಯಾಂಡ್ಸ್ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ಗುಜರಾತ್‌ನ ಗೋಧ್ರಾ ಮೂಲದ ಕೇತಾ ಗೋಹಿಲ್ (30) ಮತ್ತು ನೀಲ್ ಗೋಹಿಲ್ (26) ಎಂದು ಗುರುತಿಸಲಾಗಿದ್ದು ಇನ್ನಿಬ್ಬರ ಗುರುತು ಇನ್ನಷ್ಟೇ ಲಭ್ಯವಾಗಬೇಕಿದೆ. ಐವರು ಪ್ರಯಾಣಿಸುತ್ತಿದ್ದ ಕಾರು ಟೊರೊಂಟೊ ಬಳಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ ಮತ್ತೋರ್ವ ಯುವತಿ ಗಂಭೀರ ಗಾಯಗೊಂಡಿದ್ದು ಪೊಲೀಸರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
