ಕ್ಯಾಲ್ಗರಿ: ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ಭಾರತೀಯ ಶಟ್ಲರ್ ಲಕ್ಷ್ಯ ಸೇನ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಮಹತ್ವದ ಟ್ರೋಫಿ ಮುಡಿಗೇರಿಸಿಕೊಂಡಿದ್ದಾರೆ.
ಭಾರತದ ಯುವ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ಅವರು ಕೆನಡಾ ಓಪನ್ನಲ್ಲಿ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಕೆನಡಾದ ಕ್ಯಾಲ್ಗರಿಯಲ್ಲಿ ನಡೆದ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಫೈನಲ್ನಲ್ಲಿ ಚೀನಾದ ಲಿ ಶಿ ಫೆಂಗ್ ಅವರನ್ನು 21-18, 22-20 ನೇರ ಸೆಟ್ಗಳಿಂದ ಸೋಲಿಸಿ ಗೆಲುವು ದಾಖಲಿಸಿದ್ದಾರೆ. ಇದರೊಂದಿಗೆ ಲಕ್ಷ್ಯಸೇನ್ 2ನೇ ಬಾರಿಗೆ ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಚಾಂಪಿಯನ್ ಎನಿಸಿಕೊಂಡಿದ್ದಾರೆ.