ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹುದ್ದೆಯ ರೇಸ್ ನಲ್ಲಿ ನಾನಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸದ್ಯ ಕಾಂಗ್ರೆಸ್ ನಲ್ಲಿ ಬಹು ಚರ್ಚೆಯಲ್ಲಿರುವ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ಕುರಿತಂತೆ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು
ಅಧ್ಯಕ್ಷ ಸ್ಥಾನದ ಬದಲಾವಣೆ ಆಗಬೇಕೆಂದರೆ ಮೊದಲು ಆ ಸ್ಥಾನ ಖಾಲಿ ಆಗಬೇಕಲ್ವಾ? ಬದಲಾವಣೆ ಬದಲು ಅಧಿಕಾರ ವಿಸ್ತರಣೆಯೂ ಆಗಬಹುದಲ್ವಾ . ಒಂದು ವೇಳೆ ಆದರೂ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳುತ್ತೆ ಎಂದರು.
ಅಧ್ಯಕ್ಷ ಹುದ್ದೆ ಖಾಲಿಯದರೂ ಅದರ ಸ್ಪರ್ಧೆಯಲ್ಲಿ ನಾನಿಲ್ಲ, ಮುಂದಿನ 4 ವರ್ಷಗಳ ಕಾಲ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಲು ರಾಜ್ಯ ಸುತ್ತಿದ ಅನುಭವಸ್ಥರಿಗೆ ರಾಜ್ಯ ಕಾಂಗ್ರೆಸ್ ಸಾರಥ್ಯ ಸಿಗಲಿ. ಅದು ಪಕ್ಷದ ವರಿಷ್ಠರ ವಿವೇಚನೆಗೆ ಬಿಟ್ಟ ವಿಚಾರ ಎಂದು ಅಭಿಪ್ರಾಯಪಟ್ಟರು.