ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳನ್ನು(CISF Constable Jobs) ಭರ್ತಿ ಮಾಡಿಕೊಳ್ಳಲು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯು ಅಧಿಸೂಚನೆ ಪ್ರಕಟಿಸಿದೆ.
ದ್ವಿತೀಯ ಪಿಯುಸಿ ಪಾಸಾಗಿ ಕೇಂದ್ರ ಸರ್ಕಾರಿ ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ಇದು ಸುವರ್ಣ ಅವಕಾಶವಾಗಿದೆ. ಪ್ರಮುಖ ವಿಷಯವೇನೆಂದರೆ ಕರ್ನಾಟಕ ರಾಜ್ಯದಲ್ಲಿ 33 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಮೀಸಲಿಡಲಾಗಿದೆ.
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಸಪ್ಟೆಂಬರ್ 30ನೇ ತಾರೀಖಿನವರೆಗೆ ಅವಕಾಶ ನೀಡಲಾಗಿದ್ದು, ನೇಮಕಾತಿಗೆ ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ ಎಲ್ಲಾ ಅಭ್ಯರ್ಥಿಗಳು ಸಂಪೂರ್ಣ ಅರ್ಹತೆಗಳನ್ನು ತಿಳಿದುಕೊಂಡು ನಿಗದಿತ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.
ನೇಮಕಾತಿ ಅರ್ಹತೆಗಳ ವಿವರ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು. ವಯೋಮಿತಿ ಅರ್ಹತೆಗಳ ಬಗ್ಗೆ ತಿಳಿಸುವುದಾದರೆ ಕನಿಷ್ಠ 18 ವರ್ಷ ಪೂರೈಸಿದ್ದು ಗರಿಷ್ಠ 23 ವರ್ಷದ ವಯೋಮಿತಿಯಲ್ಲಿರಬೇಕು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ, ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಕೂಡ ಮೂರು ವರ್ಷದ ವಯೋಮಿತಿ ಸಡಿಲಿಕೆ ಇರಲಿದೆ.
CISF ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಹೇಗಿರಲಿದೆ?
ಈ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಮೊದಲನೇ ಹಂತದಲ್ಲಿ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ನಂತರದಲ್ಲಿ ದಾಖಲಾತಿ ಪರಿಶೀಲನೆ ಮತ್ತು ಮೆಡಿಕಲ್ ಟೆಸ್ಟ್ ಮುಖಾಂತರ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿ ಶುಲ್ಕ :
• ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ, ಇತರೆ ಹಿಂದುಳಿದ ವರ್ಗದ ಹಾಗೂ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 100ರೂ. ಅರ್ಜಿ ಶುಲ್ಕ ಪಾವತಿಸಬೇಕು.
• ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ ಸಂಪೂರ್ಣ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?
ನೀವು ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಸಂಪೂರ್ಣ ಅರ್ಹತೆ ಹೊಂದಿದ್ದೀರಿ ಎಂಬುದನ್ನು ಖಚಿತಪಡಿಸಿಕೊಂಡ ಮೇಲೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಅಧಿಕೃತ ಜಾಲತಾಣಕ್ಕೆ (ಕೆಳಗೆ ನೀಡಲಾಗಿದೆ) ಬೇಟಿ ನೀಡಿ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದು.
ಅಧಿಕೃತ ಜಾಲತಾಣ: https://cisfrectt.cisf.gov.in/
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ