ಹೈದರಾಬಾದ್: ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತರನ್ನು ಬಳಸಿಕೊಳ್ಳಲಾಗಿದೆ ಎಂಬ ಆರೋಪದಡಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಅಮಿತ್ ಶಾ ಅವರೊಂದಿಗೆ ಬಿಜೆಪಿ ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಮಾಧವಿ ಲತಾ ಮತ್ತು ಇತರ ಬಿಜೆಪಿ ನಾಯಕರ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ.
ಮೇ 1 ರಂದು ಲಾಲ್ದವಾಜಾದಿಂದ ಸುಧಾ ಟಾಕೀಸ್‌ವರೆಗೆ ನಡೆದ ಬಿಜೆಪಿಯ ಚುನಾವಣಾ ರ್ಯಾಲಿ ನಡೆದಿತ್ತು. ಈ ವೇಳೆ ಅಮಿತ್ ಶಾ ಅವರೊಂದಿಗೆ ಕೆಲ ಅಪ್ರಾಪ್ತರು ವೇದಿಕೆ ಹಂಚಿಕೊಂಡಿದ್ದರು ಎಂದು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ನಿರಂಜನ್ ರೆಡ್ಡಿ ಆರೋಪಿಸಿದ್ದು, ಈ ಬಗ್ಗೆ ತೆಲಂಗಾಣ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಲಾಗಿದೆ.
ಈ ದೂರಿನಲ್ಲಿ ಮಗುವಿನ ಕೈಯಲ್ಲಿ ಬಿಜೆಪಿ ಪಕ್ಷದ ಚಿಹ್ನೆ ಇದ್ದಿರುವುದು ಗಮನಕ್ಕೆ ಬಂದಿದೆ. ಇದು ಚುನಾವಣಾ ಆಯೋಗದ ಮಾರ್ಗಸೂಚಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಉಲ್ಲೇಖಿಸಲಾಗಿದೆ.
ದೂರಿನ ಮೇರೆಗೆ ವಾಸ್ತವತೆಯನ್ನು ಪರಿಶೀಲನೆ ಮಾಡುವಂತೆ ಚುನಾವಣಾ ಆಯೋಗದ ಅಧಿಕಾರಿಗಳು ನಗರ ಪೊಲೀಸರಿಗೆ ಪ್ರಕರಣವನ್ನು ರವಾಸಿದ್ದರು. ಬಳಿಕ ಮೊಘಲ್‌ಪುರ ಪೊಲೀಸ್ ಠಾಣೆಯಲ್ಲಿ ಅಮಿತ್ ಶಾ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.