ನವದೆಹಲಿ: ಕಾನೂನು ಹೋರಾಟದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಹಿನ್ನಡೆ ಉಂಟಾಗಿದೆ. ಅಬಕಾರಿ ನೀತಿ ಹಗರಣದ ಆರೋಪಿಯಾಗಿರುವ ಅವರು ಭಾನುವಾರ ಜೈಲಿಗೆ ಮರಳಬೇಕಿದೆ.
ಅರವಿಂದ್ ಕೇಜ್ರಿವಾಲ್ ಜಾಮೀನು ವಿಸ್ತರಣೆ ಮಾಡುವಂತೆ ಕೋರಿ ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆಯನ್ನು ದೆಹಲಿ ಕೋರ್ಟ್ ಜೂನ್ 7ಕ್ಕೆ ಮುಂದೂಡಿಕೆ ಮಾಡಿದೆ. ಆದ್ದರಿಂದ ಜಾಮೀನು ಅವಧಿ ಅಂತ್ಯಗೊಳ್ಳುತ್ತಿರುವ ಕೇಜ್ರಿವಾಲ್ ತಿಹಾರ್ ಜೈಲಿಗೆ ಮರಳಬೇಕಿದೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಷರತ್ತು ಬದ್ಧ ಜಾಮೀನು ಅವಧಿ ಜೂನ್ 1ಕ್ಕೆ ಅಂತ್ಯಗೊಂಡಿದೆ.