ಕೋಯಿಕ್ಕೋಡ್: ಕೇರಳದಲ್ಲಿ ನಿಫಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರ ಪರೀಕ್ಷಾ ಫಲಿತಾಂಶ ಶುಕ್ರವಾರ ನೆಗೆಟಿವ್ ಬಂದಿರುವುದಾಗಿ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಕೇರಳ ಆರೋಗ್ಯ ಸಚಿವರು, ನಿಫಾ ಸೋಂಕಿಗೆ ತುತ್ತಾಗಿ ಗಂಭೀರ ಸ್ಥಿತಿಯಲ್ಲಿದ್ದ 9 ವರ್ಷದ ಬಾಲಕ ಸೇರಿದಂತೆ ಎಲ್ಲಾ ರೋಗಿಗಳ ಪರೀಕ್ಷೆಯಲ್ಲಿ ಎರಡು ಬಾರಿ ನೆಗೆಟಿವ್ ಬಂದಿದೆ ಎಂದಿದ್ದಾರೆ.
ಇನ್ನು ಡಬಲ್ ನೆಗೆಟಿವ್ ಎಂದರೆ ನಿರ್ದಿಷ್ಟ ಸಮಯದ ಮಧ್ಯಂತರದ ನಂತರ ತೆಗೆದುಕೊಂಡ ಪ್ರತಿ ನಿಫಾ ರೋಗಿಯ ಎರಡು ಮಾದರಿಗಳು ಪರೀಕ್ಷೆಗೊಳಪಡಿಸಿದಾಗ ನೆಗೆಟಿವ್ ಆಗಿದೆ ಎಂಬುದನ್ನು ಇದು ಸೂಚಿಸುತ್ತದೆ. ಇದರೊಂದಿಗೆ ರೋಗಿಗಳು ಮಾರಣಾಂತಿಕ ವೈರಸ್‌ನಿಂದ ಸಂಪೂರ್ಣ ಮುಕ್ತರಾಗಿದ್ದಾರೆ ಎಂದು ತಿಳಿಸಿದ್ದಾರೆ.