ಮುಂಬೈ: ಟಾಟಾ ಇನ್ಸ್ಟಿಟ್ಯೂಟ್ ಸಂಸ್ಥೆಯು ಒಮ್ಮೆ ಕ್ಯಾನ್ಯರ್ ಗೆ ತುತ್ತಾದವರು 2 ನೇ ಬಾರಿಗೆ ಕ್ಯಾನ್ಸರ್ ಗೆ ತುತ್ತಾಗುವುದನ್ನು ತಡೆಗಟ್ಟುವ ನಿಟ್ಟಿನಿಂದ ಮಾತ್ರೆಯೊಂದನ್ನು ಪರಿಚಯಿಸಿದೆ. ಈ ಮಾತ್ರೆಯ ಬೆಳೆ ಕೇವಲ 100 ರೂಪಾಯಿ ಎಂದು ಸಂಸ್ಥೆ ಮಾಹಿತಿ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಟಾಟಾ ಸಂಸ್ಥೆಯು, ಕ್ಯಾನ್ಸರ್ಗೆ ತುತ್ತಾದವರು ರೇಡಿಯೇಶನ್ ಚಿಕಿತ್ಸೆಗೆ ಒಳಗಾದ ಬಳಿಕ ಕ್ಯಾನ್ಸರ್ ಕೋಶಗಳು ಆರೋಗ್ಯವಂತ ಕೋಶಗಳನ್ನು ಸೇರಿ ಅವುಗಳು ಕ್ಯಾನ್ಸರ್ಗೆ ತುತ್ತಾಗುವಂತೆ ಮಾಡುತ್ತಿದ್ದವು.
ಆದರೆ ಈ ಮಾತ್ರೆ ತೆಗೆದುಕೊಳ್ಳುವುದರಿಂದ ವಿಕಿರಣ ಮತ್ತು ಕೀಮೋಥೆರಪಿಯಂತಹ ಚಿಕಿತ್ಸೆಗಳ ಅಡ್ಡಪರಿಣಾಮಗಳನ್ನು 50% ರಷ್ಟು ಮಾತ್ರೆ ಕಡಿಮೆ ಮಾಡುತ್ತದೆ. ಜೊತೆಗೆ ರೋಗಿಯು 2ನೇ ಬಾರಿ ಕ್ಯಾನ್ಸರ್ಗೆ ತುತ್ತಾಗುವುದು ತಪ್ಪಲಿದೆ. ಮೊದಲು ಕ್ಯಾನ್ಸರ್ ಚಿಕಿತ್ಸೆಗೆ ಲಕ್ಷದಿಂದ ಕೋಟಿ ರೂ. ವೆಚ್ಚವಾಗುತ್ತಿದ್ದು, ಈ ಮಾತ್ರೆಯ ಬೆಲೆ ಕೇವಲ 100 ರೂ. ಇರಲಿದೆ ಎಂದು ಟಾಟಾ ಸಂಸ್ಥೆ ಹೇಳಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಟಾಟಾ ಮೆಮೋರಿಯಲ್ ಆಸ್ಪತ್ರೆಯ ಹಿರಿಯ ಕ್ಯಾನ್ಸರ್ ಶಸ್ತ್ರಚಿಕಿತ್ಸಕ ಡಾ.ರಾಜೇಂದ್ರ ಬದ್ವೆ ಅವರು ಇದರ ಪ್ರಯೋಗಕ್ಕಾಗಿ ಮೊದಲು ಇಲಿಗಳಲ್ಲಿ ಮಾನವನ ಕ್ಯಾನ್ಸರ್ ಕೋಶಗಳನ್ನು ಒಳಸೇರಿಸಿ ಕ್ಯಾನ್ಸರ್ಗೆ ತುತ್ತಾಗುವಂತೆ ಮಾಡಲಾಯಿತು. ಬಳಿಕ ರೇಡಿಯೇಶನ್ ಚಿಕಿತ್ಸೆ ನೀಡಿ ಕ್ಯಾನ್ಸರ್ ಗುಣಪಡಿಸಿ, ಕೆಲವು ಇಲಿಗಳಿಗೆ ಈ ಮಾತ್ರೆ ತಿನ್ನಿಸಲಾಗಿದೆ. ಮಾತ್ರೆ ತಿಂದ ಇಲಿಗಳಲ್ಲಿ 2ನೇ ಬಾರಿ ಕ್ಯಾನ್ಸರ್ ಕಾಣಿಸಿಕೊಂಡಿಲ್ಲ ಎಂದು ತಿಳಿಸಿದ್ದಾರೆ.