ಬೇಸಿಗೆ ಆರಂಭಗೊಳ್ಳುತ್ತಿದಂತೆ ರಾಜಧಾನಿ ಬೆಂಗಳೂರಿನಲ್ಲಿರುವ ಕೊಳವೆ ಬಾವಿಗಳಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಕಳೆದ 15 ದಿನದಲ್ಲಿ ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಕೊಳವೆ ಬಾವಿಗಳ ಒಡಲು ಸಂಪೂರ್ಣ ಬರಿದಾಗಿರುವುದು ತೀವ್ರ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.
ಬೆಂಗಳೂರಿನ 1.40 ಕೋಟಿ ಮಹಾಜನತೆಗೆ ಪ್ರತಿ ದಿನ ಕಾವೇರಿಯಿಂದ 1,450 ಎಂಎಲ್‌ಡಿಯಷ್ಟು ನೀರು ಪಂಪ್ ಮಾಡಿ ಪೂರೈಕೆ ಮಾಡಲಾಗುತ್ತಿದೆ.