ನವದೆಹಲಿ: ಕರ್ನಾಟಕಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ಘೋಷಣೆಯನ್ನು ಕೇಂದ್ರ ಸರ್ಕಾರವು ಮಾಡಿದೆ.
ಇನ್ನು ಚಂಡಮಾರುತ ಹಾಗೂ ಪ್ರವಾಹ ಪರಿಹಾರವೆಂದು ತಮಿಳುನಾಡಿಗೆ 275 ಕೋಟಿ ರೂಪಾಯಿ ಪರಿಹಾರ ನೀಡಿದೆ.
ಕರ್ನಾಟಕಕ್ಕೆ ಬರ ಪರಿಹಾರ ನಿಧಿ ಬಂದಿಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.
ಸುಪ್ರೀಂಕೋರ್ಟ್ನ ನ್ಯಾ.ಬಿ.ಆರ್.ಗವಾಯಿ ನೇತೃತ್ವದ ದ್ವಿಸದಸ್ಯ ಪೀಠವು ಏಪ್ರಿಲ್ 22ರಂದು ಅರ್ಜಿ ವಿಚಾರಣೆ ನಡೆಸಿತ್ತು. ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್ ವೆಂಕಟರಮಣಿ ವಾದ ಮಂಡಿಸಿದ್ದರು.
ವಿಚಾರಣೆ ಬಳಿಕ ಕೇಂದ್ರ ಸರ್ಕಾರವು ಏಪ್ರಿಲ್ 29ರ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಸುಪ್ರೀಂಕೋರ್ಟ್ಗೆ ಹೇಳಿತ್ತು.