ಚೆನ್ನೈ: ಕೊಯಮತ್ತೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಬರ್ತ್ ಡೇ ಬಾಯ್ ಕೆ.ಅಣ್ಣಾಮಲೈ ಸೋಲು ಅನುಭವಿಸಿದ್ದಾರೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. ಕೊಯಮತ್ತೂರು ಕ್ಷೇತ್ರದಲ್ಲಿ ಡಿಎಂಕೆಯ ಗಣಪತಿ ರಾಜ್‌ಕುಮಾರ್ ಅವರು ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಎಐಎಡಿಎಂಕೆಯ ಸಿಂಗೈ ರಾಮಚಂದ್ರನ್ ಮೂರನೇ ಸ್ಥಾನದಲ್ಲಿದ್ದಾರೆ. ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಕೆ.ಅಣ್ಣಾಮಲೈ ಅವರು ತಮ್ಮ 40ನೇ ಹುಟ್ಟುಹಬ್ಬದಂದು ತಮ್ಮ ಮೊದಲ ಚುನಾವಣಾ ಗೆಲುವನ್ನು ದಾಖಲಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು.
