ಮಧ್ಯಪ್ರದೇಶ: ಮಧ್ಯಪ್ರದೇಶ ಪಿಪ್ಲಿಯಾ ರಸೋಡಾ ಗ್ರಾಮದ 25 ಅಡಿ ಆಳದ ಕೊಳವೆ ಬಾವಿಯೊಳಗೆ ಸಿಲುಕಿಕೊಂಡಿದ್ದ ನಾಲ್ಕು ವರ್ಷದ ಬಾಲಕಿ ರಕ್ಷಿಸಿದ ಕೆಲವೇ ಗಂಟೆಗಳಲ್ಲಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
4 ವರ್ಷದ ಬಾಲಕಿ ಮಹಿ ಮೃತಪಟ್ಟ ದುರ್ದೈವಿ. ಈಕೆ ಮಂಗಳವಾರದಂದು ಸಂಜೆ 5.30ರ ವೇಳೆಗೆ ಕೊಳವೆ ಬಾವಿಗೆ ಬಿದ್ದಿದ್ದಾಳೆ. ತಕ್ಷಣ ಕಾರ್ಯಪ್ರವೃತ್ತರಾದ ರಕ್ಷಣಾ ಸಿಬ್ಬಂದಿ ತಡ ರಾತ್ರಿ 2.30 ವರೆಗೆ ಕಾರ್ಯಾಚರಣೆ ನಡೆಸಿ ಬಾಲಕಿಯನ್ನು ಸುರಕ್ಷಿತವಾಗಿ ರಕ್ಷಿಸಿ ಪಚೋರ್ನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದರು.
ಬಾಲಕಿಯ ಸ್ಥಿತಿ ಗಂಭೀರವಾಗಿದ್ದರಿಂದ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಪಚೋರ್ನಿಂದ ಭೋಪಾಲ್ ನ ಹಮಿಡಿಯಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು.ಆದ್ರೆ ಚಿಕಿತ್ಸೆ ಫಲಿಸದೆ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಬಾಲಕಿಯ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಯಿತು.