ಹವಾನಾ :ದಕ್ಷಿಣ ಕ್ಯೂಬಾದಲ್ಲಿ ಭಾನುವಾರದಂದು ಎರಡು ಪ್ರಬಲ ಭೂಕಂಪಗಳು ಸಂಭವಿಸಿವೆ ಎಂದು ಯುಎಸ್ ಭೂವಿಜ್ಞಾನಿಗಳು ಹೇಳಿದ್ದಾರೆ. ಯಾವುದೇ ಸಾವುಗಳು ತಕ್ಷಣವೇ ವರದಿಯಾಗಿಲ್ಲ.
ಭೂಕಂಪದ ಕೇಂದ್ರ 14 ಕಿಮೀ (8.7 ಮೈಲುಗಳು) ಆಳದಲ್ಲಿದೆ. ಯಾವುದೇ ಸುನಾಮಿ ಭೀತಿ ಇಲ್ಲ ಎಂದು ಅಮೆರಿಕದ ಜಿಯಾಲಾಜಿಕಲ್ ಸರ್ವೆ ತಿಳಿಸಿದೆ.
ಭೂಕಂಪದ ಪರಿಣಾಮ ಹಲವೆಡೆ ಭೂಕುಸಿತ ಸಂಭವಿಸಿದೆ ಎಂದು ವರದಿಯಾಗಿದೆ. ಹಲವಾರು ಮನೆಗಳು ಹಾನಿಗೊಳಗಾಗಿವೆ. ಅಲ್ಲದೇ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಈ ಸಮಯದಲ್ಲಿ ನಮ್ಮ ಮೊದಲ ಆದ್ಯತೆ ಜನರ ಜೀವಗಳನ್ನು ಉಳಿಸುವುದು ಎಂದು ಕ್ಯೂಬಾದ ಅಧ್ಯಕ್ಷ ಮಿಗುಯೆಲ್ ಡಯಾಜ್-ಕ್ಯಾನೆಲ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.