ಛತ್ತೀಸ್ಗಢ: ಖಾಸಗಿ ಬಸ್ ಗಣಿ ಪ್ರದೇಶದ ಗುಂಡಿಗೆ ಬಿದ್ದ ಪರಿಣಾಮ 12 ಜನರು ಮೃತಪಟ್ಟಿದ್ದು, 14 ಜನ ಗಾಯಗೊಂಡಿರುವ ಘಟನೆ ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ನಡೆದಿದೆ.
ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 30ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದ ಬಸ್, ದುರ್ಗ್ ಜಿಲ್ಲೆಯ ಖಾಪ್ರಿ ಬಳಿ ಆಯ ತಪ್ಪಿ ಗುಂಡಿಗೆ ಉರುಳಿದೆ. ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಮೂವರು ಮಹಿಳೆಯರು ಸೇರಿದಂತೆ 12 ಜನರು ಮೃತಪಟ್ಟಿದ್ದು, 14 ಜನ ಗಾಯಗೊಂಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ರಾಜ್ಯ ವಿಪತ್ತು ನಿರ್ವಹಣಾ ಪಡೆ ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಗೊಂಡವರನ್ನು ರಾಯ್ಪುರದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (ಏಮ್ಸ್) ದಾಖಲಿಸಲಾಗಿದೆ.