ನವದೆಹಲಿ: 2012ರಲ್ಲಿ ನಡೆದ ಗಗನಸಖಿ ಗೀತಿಕಾ ಶರ್ಮಾ ಆತ್ಮಹತ್ಯೆ ಪ್ರಕರಣದಲ್ಲಿ ಹರಿಯಾಣದ ಮಾಜಿ ಸಚಿವ ಗೋಪಾಲ್ ಗೋಯಲ್ ಕಂಡಾ ನಿರ್ದೋಷಿ ಎಂದು ದೆಹಲಿ ನ್ಯಾಯಾಲಯ ಇಂದು ತೀರ್ಪು ನೀಡಿದೆ. ಪ್ರಕರಣದಲ್ಲಿ ಆರೋಪ ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.
ಆತ್ಮಹತ್ಯೆಗೆ ಪ್ರಚೋದನೆ, ಕ್ರಿಮಿನಲ್ ಬೆದರಿಕೆ ಹಾಗೂ ಕ್ರಿಮಿನಲ್ ಪಿತೂರಿಯ ಆರೋಪದ ಮೇಲೆ ಹರ್ಯಾಣದ ಮಾಜಿ ಗೃಹ ವ್ಯವಹಾರಗಳ ರಾಜ್ಯ ಸಚಿವ ವಿರುದ್ಧ ಪ್ರಕರಣ ದಾಖಲಾಗಿತ್ತು. ಗೀತಿಕಾ ಶರ್ಮಾ ಅವರು ತಮ್ಮ ಆತ್ಮಹತ್ಯಾ ಟಿಪ್ಪಣಿಯಲ್ಲಿ ಸಿರ್ಸಾ ಶಾಸಕ ಗೋಪಾಲ್ ಕಾಂಡ ಹಾಗೂ ಎಚ್ ಆರ್ ಮ್ಯಾನೇಜರ್ ಅರುಣಾ ಚಡ್ಡಾ ತನ್ನ ಸಾವಿಗೆ ಕಾರಣ ಎಂದು ಬರೆದಿದ್ದರು .
ಕಂಡಾ ನಡೆಸುತ್ತಿದ್ದ ಎಂಎಲ್‌ಡಿಆರ್ ಏರ್‌ಲೈನ್ಸ್‌ನಲ್ಲಿ ಗೀತಿಕಾ ಉದ್ಯೋಗಿಯಾಗಿದ್ದರು. 2012ರ ಆ5ರಂದು ದೆಹಲಿಯ ಅಶೋಕ ವಿಹಾರದಲ್ಲಿರುವ ಮನೆಯಲ್ಲಿ ಗೀತಿಕಾ ಅವರ ಮೃತದೇಹ ಪತ್ತೆಯಾಗಿತ್ತು.