ನವದೆಹಲಿ: ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ‘ಶಸ್ತ್ರ’ ಪೂಜೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೆರವೇರಿಸಿದರು. . ಚೀನಾದ ಗಡಿಯ ಪ್ರದೇಶದ ಆಯಕಟ್ಟಿನ ಪ್ರಮುಖ ಸೇನಾ ಯೋಧರೊಂದಿಗೆ ದಸರಾ ಆಚರಿಸಿದರು.
ಭಾರತ ಹಾಗೂ ಚೀನಾ ನಡುವೆ ಸಂಘರ್ಷ ಏರ್ಪಟ್ಟಿರುವ ವಾಸ್ತವ ನಿಯಂತ್ರಣ ರೇಖೆಯ) ಸಮೀಪದ ಸೇನಾ ನೆಲೆಯಲ್ಲಿ ರಾಜನಾಥ ಸಿಂಗ್ ಸೈನಿಕರೊಂದಿಗೆ ದಸರಾ ಹಬ್ಬ ಆಚರಿಸಿರುವುದು ಮಹತ್ವ ಪಡೆದುಕೊಂಡಿದೆ.
ಇದೇ ವೇಳೆ ರಾಜ್‌ನಾಥ್ ಸಿಂಗ್ ಅವರು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರೊಂದಿಗೆ ಅರುಣಾಚಲ ಪ್ರದೇಶದ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಭಾರತದ ಮಿಲಿಟರಿ ಸನ್ನದ್ಧತೆಯ ಸಮಗ್ರ ಪರಿಶೀಲನೆಯನ್ನು ನಡೆಸಿದರು. ಅಪ್ರತಿಮ ಧೈರ್ಯ ದಿಂದ ಗಡಿಯನ್ನು ಕಾಯುತ್ತಿರುವ ಸೈನಿಕರನ್ನು ಪ್ರಶಂಸೆ ವ್ಯಕ್ತಪಡಿಸಿದರು.
ಬಳಿಕ ಸೈನಿಕರೊಂದಿಗಿನ ಸಂವಾದದಲ್ಲಿ ಮಾತನಾಡಿದ ಸಿಂಗ್, ಪ್ರಸ್ತುತ ಜಾಗತಿಕ ಸನ್ನಿವೇಶದ ದೃಷ್ಟಿಯಿಂದ ದೇಶದ ಭದ್ರತಾ ಉಪಕರಣವನ್ನು ಬಲಪಡಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ.ರಾಷ್ಟ್ರದ ಮಿಲಿಟರಿ ಸಾಮರ್ಥ್ಯವನ್ನು ಬಲಪಡಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.
ನೀವು ಗಡಿಯನ್ನು ಕಾಪಾಡುತ್ತಿರುವ ರೀತಿಗೆ ಎಷ್ಟೇ ಮೆಚ್ಚುಗೆ ವ್ಯಕ್ತಪಡಿಸಿದರು ಸಾಲದು ಎಂದು ಸೈನಿಕರಿಗೆ ತಿಳಿಸಿದರು.