ಚಿಕ್ಕಮಗಳೂರು: ಗಣಪತಿ ಹಬ್ಬದ ಹಿನ್ನೆಲೆಯಲ್ಲಿ ಗಣಪತಿ ಮೂರ್ತಿ ತರಲು ಹೋದ ವೇಳೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇಬ್ಬರು ಗಂಭೀರ ಗಾಯಗೊಂಡಿದ್ದು, ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.


































