ರಾಯಚೂರು: ವಿದ್ಯಾರ್ಥಿ ಓದಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿಯೊಬ್ಬರು ವಿದ್ಯಾರ್ಥಿಗೆ ಮನಬಂದಂತೆ ಹೊಡೆದಿದ್ದು, ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಲಗ ಗ್ರಾಮದಲ್ಲಿ ನಡೆದಿದೆ.!
ಗಲಗ ಗ್ರಾಮದ ಸರ್ಕಾರಿ ಉರ್ದು ಶಾಲೆಯ ಶಿಕ್ಷಕಿ ಹರ್ಷಿಯಾ ತಸ್ಕಿನ್ ಬಾಲಕನಿಗೆ ಬಾಸುಂಡೆ ಬರುವಂತೆ ಥಳಿಸಿದ್ದಾಳೆ. ಓದಿಲ್ಲ ಎಂಬ ಕಾರಣ ನೀಡಿ ೩ನೇ ತರಗತಿಯ ವಿದ್ಯಾರ್ಥಿಯನ್ನು ಮನಸೋ ಇಚ್ಛೇ ಹೊಡೆದಿದ್ದು, ಗಂಭೀವಾಗಿ ಹಲ್ಲೆಗೊಳಗಾದ ಬಾಲಕನ ಸ್ಥಿತಿ ಗಂಭೀರವಾಗಿದೆ.
ಬಾಲಕನ ಮೈತುಂಬಾ ಬಾಸುಂಡೆ ಬಂದಿದೆ. ಗಾಯಾಳು ಬಾಲಕನನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಶಿಕ್ಷಕಿ ಹರ್ಷಿಯಾ ತಸ್ನಿಯಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ

































