ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಮತ್ತು ಇತರ ಗಣ್ಯರು ಮಹಾತ್ಮ ಗಾಂಧಿಯವರ 154ನೇ ಜನ್ಮದಿನದ ಅಂಗವಾಗಿ ದೆಹಲಿಯ ರಾಜ್‌ಘಾಟ್‌ನಲ್ಲಿ ಪುಷ್ಪ ನಮನ ಸಲ್ಲಿಸಿದರು.
ಇದೇ ವೇಳೆ, ರಾಜ್‌ಘಾಟ್‌ನಲ್ಲಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಇತರ ಮುಖಂಡರು ಪುಷ್ಪ ನಮನ ಸಲ್ಲಿಸಿದರು.ದೆಹಲಿ ಎಲ್‌ಜಿ ವಿಕೆ ಸಕ್ಸೇನಾ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ಡಾ ಜಿತೇಂದ್ರ ಸಿಂಗ್ ಮತ್ತು ಮೀನಕಾಶಿ ಲೇಖಿ ಸೇರಿದಂತೆ ಗಣ್ಯರು ರಾಜ್‌ಘಾಟ್‌ಗೆ ಭೇಟಿ ನೀಡಿ ಗಾಂಧಿಜೀಗೆ ಗೌರವ ನಮನ ಸಲ್ಲಿಸಿದರು
“ಗಾಂಧಿ ಜಯಂತಿಯ ವಿಶೇಷ ಸಂದರ್ಭದಲ್ಲಿ ನಾನು ಮಹಾತ್ಮ ಗಾಂಧಿ ಅವರಿಗೆ ನಮಸ್ಕರಿಸುತ್ತೇನೆ. ಅವರ ಕಾಲಾತೀತ ಬೋಧನೆಗಳು ನಮ್ಮ ಮಾರ್ಗವನ್ನು ಬೆಳಗಿಸುತ್ತಲೇ ಇರುತ್ತವೆ. ಮಹಾತ್ಮಾ ಗಾಂಧಿಯವರ ಪ್ರಭಾವವು ಜಾಗತಿಕವಾಗಿದೆ, ಇಡೀ ಮಾನವಕುಲವನ್ನು ಏಕತೆ ಮತ್ತು ಸಹಾನುಭೂತಿಯ ಮನೋಭಾವವನ್ನು ಹೆಚ್ಚಿಸಲು ಪ್ರೇರೇಪಿಸುತ್ತದೆ. ಅವರ ಕನಸುಗಳನ್ನು ನನಸಾಗಿಸಲು ನಾವು ಯಾವಾಗಲೂ ಕೆಲಸ ಮಾಡೋಣ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.