ದಾವಣಗೆರೆ: ಸಶಸ್ತ್ರ ಮೀಸಲು ಪಡೆಯ ಕಾನ್ಸ್ಸ್ಟೇಬಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಹಾನಗರ ಪಾಲಿಕೆಯ ಸ್ಟ್ರಾಂಗ್ ಬಳಿ ನಡೆದಿದೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿ ನಿವಾಸಿ ಗುರುಮೂರ್ತಿ (34) ಆತ್ಮಹತ್ಯೆಗೆ ಯತ್ನಿಸಿದ ಪೇದೆ. ಗುಂಡು ಹಾರಿಸಿಕೊಂಡು ರಕ್ತದ ಮಡುವಿನಲ್ಲಿ ಬಿದ್ದ ಗುರುಮೂರ್ತಿಯನ್ನ ಕೂಡಲೇ ಸಿಟಿ ಸೆಂಟ್ರಲ್ ಆಸ್ಪತ್ತೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಿತಿ ಗಂಭೀರವಾಗಿದೆ.
ಕಳೆದ ಕೆಲ ದಿನಗಳಿಂದ ಇವಿಎಂ ಮಷಿನ್ ಕಾವಲು ಸೇವೆಯಲ್ಲಿದ್ದ ಗುರುಮೂರ್ತಿ, ಇದೀಗ ಏಕಾಎಕಿ ಆತ್ಮಹತ್ಯೆಗೆ ಯತ್ನಿಸಿರುವುದು ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.ಮೇಲ್ನೋಟಕ್ಕೆ ಕೌಟುಂಬಿಕ ಕಲಹದ ಶಂಕೆ ವ್ಯಕ್ತವಾಗಿದೆ. ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ