ಹೊಸದಿಲ್ಲಿ : ಪಾನ್ ಮಸಾಲ, ಗುಟ್ಕಾ ತಂಬಾಕು ಉತ್ಪನ್ನಗಳ ಪ್ಯಾಕಿಂಗ್ ಮಾಡಿ ಮಾರಾಟ ಮಾಡುವವರಿಗೆ ಕೇಂದ್ರ ಸರ್ಕಾರ ಹೊಸ ನಿಯಮ ಜಾರಿ ಮಾಡಿದೆ.
ಹೌದು ಇಂತಹ ತಂಬಾಕು ಉತ್ಪನ್ನಗಳ ಉತ್ಪಾದಕರು ಪ್ಯಾಕಿಂಗ್ ಮಷಿನ್ ಗಳನ್ನು ಜಿಎಸ್‌ಟಿ ಪ್ರಾಧಿಕಾರಗಳ ಬಳಿ ಕಡ್ಡಾಯವಾಗಿ ನೋಂದಣಿ ಮಾಡಬೇಕು. ಇಲ್ಲದಿದ್ದರೆ ಒಂದು ಲಕ್ಷ ರೂಪಾಯಿ ದಂಡ ವಿಧಿಸಲಾಗುವುದು. ತಂಬಾಕು ಉತ್ಪನ್ನದಲ್ಲಿ ಆದಾಯ ಸೋರಿಕೆ ತಡೆ ಉದ್ದೇಶದಿಂದ ಕೇಂದ್ರ ಸರ್ಕಾರ ಈ ನಿಯಮ ಜಾರಿಗೆ ತಂದಿದೆ ಎಂದು ಕಂದಾಯ ಇಲಾಖೆ ಕಾರ್ಯದರ್ಶಿ ಸಂಜಯ್ ಮಲ್ಹೋತ್ರ ತಿಳಿಸಿದ್ದಾರೆ.