ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.
ಇಂದಿನಿಂದ ಹೊಸ BPL/APL ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಪೋರ್ಟಲ್ ಆರಂಭವಾಗಲಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್ www.ahara.kannic.in ಮೂಲಕ ಹೊಸ ಅರ್ಜಿ ಸಲ್ಲಿಸಬಹುದು.
ಪಡಿತರ ಚೀಟಿ ಪಟ್ಟಿಯಲ್ಲಿ ಹೆಸರಿಲ್ಲದ ಜನರು ಅಗತ್ಯವಿರುವ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ತಮ್ಮ ಅರ್ಜಿಯ ಸ್ಥಿತಿಗತಿಯನ್ನೂ ಪರಿಶೀಲಿಸಬಹುದು. ಹೊಸ ಪಡಿತರ ಚೀಟಿಯನ್ನು ಮಾಡಿಸಬಹುದು.