ಛತ್ತೀಸ್‌ಗಢ: ಹೆದ್ದಾರಿ ಬದಿ ನಿಂತಿದ್ದ ಗೂಡ್ಸ್ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮಕ್ಕಳು ಸೇರಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, 22 ಮಂದಿಗೆ ಗಾಯವಾದ ಘಟನೆ ಛತ್ತೀಸ್‌ಗಢದ ಬೆಮೆತಾರಾದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಮೃತರನ್ನು ಭೂರಿ ನಿಶಾದ್ (50), ನೀರಾ ಸಾಹು (55), ಗೀತಾ ಸಾಹು (60), ಅಗ್ನಿಯಾ ಸಾಹು (60), ಖುಷ್ಬು ಸಾಹು (39), ಮಧು ಸಾಹು (5), ರಿಕೇಶ್ ನಿಶಾದ್ (6) ಮತ್ತು ಟ್ವಿಂಕಲ್ ನಿಶಾದ್ ಎಂದು ಗುರುತಿಸಲಾಗಿದೆ.
ಮೃತರು ಕೌಟುಂಬಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದ ವೇಳೆ ಕಥಿಯಾ ಗ್ರಾಮದ ಬಳಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ 22 ಮಂದಿ ಗಾಯಗೊಂಡಿದ್ದು ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.