ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಬಾಕಿ ಹಣದ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಸಿಗುತ್ತಿಲ್ಲ.
ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಈ ಕುರಿತು ಯಜಮಾನಿಯರು ಭಾರೀ ಗೊಂದಲದಲ್ಲಿ ಇದ್ದಾರೆ.
ಇದೀಗ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಖುಷಿ ಸುದ್ದಿ ನೀಡಿದ್ದಾರೆ.
ಜುಲೈ, ಆಗಸ್ಟ್ ತಿಂಗಳ ₹4000 ಹಣ ಶೀಘ್ರವೇ ಜಮೆ ಆಗಲಿದೆ ಎಂದು ಹೇಳಿದ್ದಾರೆ.