‘ಗೃಹಲಕ್ಷ್ಮಿ ಸಮಸ್ಯೆ ನಿವಾರಣೆ’ಗೆ ಇಂದಿನಿಂದ ‘ಮೂರುದಿನ ‘ವಿಶೇಷ ಕ್ಯಾಂಪ್‌’ ಆರಂಭ

ಯೋಜನೆ ಸಂಬಂಧ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಇದೇ 27ರಿಂದ 29ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರವನ್ನು ಆಯೋಜಿಸಿದೆ.

ಈ ಪ್ರಕ್ರಿಯೆಯಲ್ಲಿ ಸುಮಾರು 2.5 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡದೇ ಇರುವುದು ಮತ್ತು ಸುಮಾರು 70,000 ನಿಷ್ಕ್ರಿಯ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಿರುವುದು ಕಂಡು ಬಂದಿರುತ್ತದೆ.

ಈ ಫಲಾನುಭವಿಗಳು ಹೊಸ ಬ್ಯಾಂಕ್ ಖಾತೆ ತೆರೆಯಲು ಇಚ್ಛಿಸಿರುವುದು ಗಮನಕ್ಕೆ ಬಂದಿರುತ್ತದೆ. ಹಾಗೆಯೇ, ಬಹಳಷ್ಟು ಫಲಾನುಭವಿಗಳು ನೇರ ನಗದು ವರ್ಗಾವಣೆ ಪ್ರಕ್ರಿಯೆಯನ್ನು ಸುಗಮಗೊಳಿಸಲು ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದು ಅಗತ್ಯವಿರುತ್ತದೆ.

Advertisement

ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸಲು ಮಾನ್ಯ ಮುಖ್ಯಮಂತ್ರಿಗಳು ಸೂಚನೆ ನೀಡಿರುತ್ತಾರೆ. ಅದರಂತೆ, ದಿನಾಂಕ:27.12.2023 ರಿಂದ 29.12.2023 ರವರೆಗೆ ಕ್ಯಾಂಪ್‌ಗಳನ್ನು ಆಯೋಜಿಸುವ ಕುರಿತು ಈ ಕೆಳಕಂಡಂತ ಸೂಚನೆಗಳನ್ನು ನೀಡಲಾಗಿದೆ.

1. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸತಕ್ಕದ್ದು.
2. ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಸಂಬಂಧಿಸಿದ ಸಮಸ್ಯೆಗಳನ್ನು ಈ ಕ್ಯಾಂಪ್‌ಗಳಲ್ಲಿ ಪರಿಹರಿಸತಕ್ಕದ್ದು.
3. ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಗಣಕ ಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು ಮತ್ತು Electronic Delivery of Citizen Services (EDCS) ತಂಡಗಳು ಈ ಕ್ಯಾಂಪ್‌ಗಳಲ್ಲಿ ಭಾಗವಹಿಸತಕ್ಕದ್ದು. 4. ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನ ಪ್ರತಿನಿಧಿಗಳು ಮತ್ತು ಇತರೆ ಬ್ಯಾಂಕ್‌ಗಳ ಪ್ರತಿನಿಧಿಗಳು ಈ ಕ್ಯಾಂಪ್‌ಗಳಲ್ಲಿ ಭಾಗವಹಿಸತಕ್ಕದ್ದು.

5. ಕ್ಯಾಂಪ್‌ಗಳಲ್ಲಿ ಫಲಾನುಭವಿಗಳಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸತಕ್ಕದ್ದು.
•ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದು.
ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ ಮಾಡುವುದು.
ಇ-ಕೆವೈಸಿ ಅಪ್‌ಡೇಟ್ ಮಾಡುವುದು.
ಗೃಹಲಕ್ಷ್ಮೀ ಅರ್ಜಿಯ ಸ್ಥಿತಿ ಪರಿಶೀಲಿಸುವುದು.
ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಪರಿಹರಿಸುವುದು.
6. ಕ್ಯಾಂಪ್‌ಗಳನ್ನು ಆಯೋಜಿಸುವ ಕುರಿತು ದಿನಾಂಕ:22.12.2023 ರಂದು ಕ್ಯಾಂಪ್ ಆಯೋಜಿಸುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ಆಯೋಜಿಸುವುದು.
7. ಪ್ರತಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ದಿನಾಂಕ:27.12.2023 ರಿಂದ 29.12.2023 ರವರೆಗೆ ಪ್ರತಿದಿನ ಬೆಳಿಗ್ಗೆ 9.00 ರಿಂದ ಸಂಜೆ 5.00 ಗಂಟೆಯವರೆಗೆ ಕ್ಯಾಂಪ್‌ಗಳನ್ನು ಆಯೋಜಿಸುವುದು.
8. ಕ್ಯಾಂಪ್ ಆಯೋಜಿಸುವ ಕುರಿತು ಫಲಾನುಭವಿಗಳಿಗೆ EDCS ರವರು SMS ಮೂಲಕ ಮಾಹಿತಿ ನೀಡುವುದು, 9. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕ್ಷೇತ್ರಮಟ್ಟದ ಸಿಬ್ಬಂದಿಗಳು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮಾಹಿತಿ ನೀಡಿ, ಅವರನ್ನು ಕ್ಯಾಂಪ್‌ಗಳಿಗೆ ಕರೆತರುವ ಜವಾಬ್ದಾರಿ ನಿರ್ವಹಿಸುವುದು.
10. ಕ್ಯಾಂಪ್ ಆಯೋಜಿಸುವ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪತ್ರಿಕೆ ಮತ್ತು ಇತರೆ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ನೀಡತಕ್ಕದ್ದು. ಮೇಲೆ ತಿಳಿಸಿದಂತೆ, ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಕ್ಯಾಂಪ್‌ಗಳನ್ನು ಆಯೋಜಿಸಿ ಯಶಸ್ವಿಗೊಳಿಸಲು ಸೂಚಿಸಿದೆ.

ಗೃಹಲಕ್ಷ್ಮಿ ಯೋಜನೆ ಅರ್ಜಿದಾರರಿಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಬುಧವಾರದಿಂದ ಶುಕ್ರವಾರದವರೆಗೆ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಶಿಬಿರ ಆಯೋಜಿಸಲಾಗಿದೆ. ಪಂಚಾಯತ್‌ ರಾಜ್‍‌ ಅಧಿಕಾರಿಗಳ ನೇತೃತ್ವದಲ್ಲಿ ಶಿಬಿರ ನಡೆಯಲಿದ್ದು, ಬಾಪೂಜಿ ಸೇವಾ ಕೇಂದ್ರದ ಕಂಪ್ಯೂಟರ್‌ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು, ಎಲೆಕ್ಟ್ರಾನಿಕ್‌ ಡೆಲಿವರಿ ಆಫ್‌ ಸಿಟಿಜನ್‌ ಸರ್ವಿಸಸ್‌ (ಇ.ಡಿ.ಸಿ) ತಂಡಗಳ ಸಿಬ್ಬಂದಿ, ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಹಾಗೂ ಇತರ ಬ್ಯಾಂಕ್‌ಗಳ ಪ್ರತಿನಿಧಿಗಳು ಈ ಶಿಬಿರದಲ್ಲಿ ಭಾಗವಹಿಸುತ್ತಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement