ಪಶ್ಚಿಮ ಬಂಗಾಳ :ಆನ್ಲೈನ್ ಗೇಮ್ ಪಾಸ್ವರ್ಡ್ ಕೊಟ್ಟಿಲ್ಲವೆಂದು ಗೆಳೆಯರು ಸೇಹಿತನನ್ನು ಕೊಂದು, ಸುಟ್ಟುಹಾಕಿ ಕಾಡಿನಲ್ಲಿ ಎಸೆದ ಹೃದಯ ವಿದ್ರಾವಕ ಘಟನೆಯೊಂದು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಪಾಪೈ ದಾಸ್ (18) ಸ್ನೇಹಿತರಿಂದ ಕೊಲೆಯಾದ ದುರ್ದೈವಿಯಾಗಿದ್ದಾನೆ.ಮೊಬೈಲ್ ಗೇಮ್ ನ್ (ಫ್ರೀ ಫೈರ್) ಪಾಸ್ವರ್ಡ್ ಹಂಚಿಕೊಳ್ಳಲು ನಿರಾಕರಿಸಿದ್ದಕ್ಕಾಗಿ ಯುವಕನನ್ನು ಆತನ ನಾಲ್ವರು ಸ್ನೇಹಿತರು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ಹಲವು ದಿನಗಳಿಂದ ನಾಪತ್ತೆಯಾಗಿದ್ದ ಪಾಪೈ ದಾಸ್ ಶವ ಜನವರಿ 15 ರಂದು ಕಾಡಿನಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆಯಲ್ಲಿ ಭಾಗಿಯಾಗಿದ್ದ ನಾಲ್ವರು ಅಪ್ರಾಪ್ತ ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ.
ನಾಳೆ ಜಿಲ್ಲಾ ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಯುವಕನ ತಾಯಿ ಪೂರ್ಣಿಮಾ ದಾಸ್ ಪೊಲೀಸರಿಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ತನಿಖೆಯನ್ನು ಪ್ರಾರಂಭಿಸಲಾಗಿತ್ತು.