ಬೆಂಗಳೂರು : ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ, ರಾಸಾಯನಿಕ ಬಳಕೆಗೆ ಈಗಾಗಲೇ ನಿರ್ಬಂಧ ವಿಧಿಸಿರುವ ಕರ್ನಾಟಕ ಆಹಾರ ಹಾಗೂ ಗುಣಮಟ್ಟ ಇಲಾಖೆ ಇದೀಗ ಗೋಲ್ ಗಪ್ಪಾ ಪ್ರೀಯರಿಗೆ ಶಾಕ್ ನೀಡಲಿದ್ದು ಮುಂದಾಗಿದ್ದು, ನಿರ್ಬಂಧ ವಿಧಿಸುವ ಸಾಧ್ಯತೆ ಇದೆ.
ಗೋಲ್ ಗಪ್ಪಾದ ಗುಣಮಟ್ಟದ ಮೇಲೆ ಅನೇಕ ದೂರುಗಳು ಕೇಳಿ ಬಂದ ಹಿನ್ನೆಲೆ ಗೋಲ್ ಗಪ್ಪಾ ಪೂರಿ ತಯಾರಿಕಾ ಘಟಕಗಳ ಮೇಲೆ ಕರ್ನಾಟಕ ಆಹಾರ ಹಾಗೂ ಗುಣಮಟ್ಟ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಆಹಾರ ಇಲಾಖೆಯಿಂದ ಫುಡ್ ಟೆಸ್ಟಿಂಗ್ ಕಾರ್ಯಾಚರಣೆ ಮುಂದುವರಿದಿದ್ದು, ಗೋಲ್ ಗಪ್ಪಾವನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
ಇನ್ನು ಬೆಂಗಳೂರಿನಲ್ಲಿ ರ‍್ಯಾಂಡಮ್ ಆಗಿ ಗೋಲ್ ಗಪ್ಪಾ ಮಾದರಿ ಸಂಗ್ರಹಿಸಿ ಪರಿಶೀಲನೆಗೆ ಒಳಪಡಿಸಲಾಗುತ್ತಿದೆ. ಜೊತೆಗೆ ಕರ್ನಾಟಕದಾದ್ಯಂತ 200 ಕ್ಕೂ ಹೆಚ್ಚು ಕಡೆ ಗೋಲ್ ಗಪ್ಪಾ ಮಾದರಿ ಸಂಗ್ರಹಿಸಲಾಗಿದ್ದು, ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಗೋಲ್ ಗಪ್ಪಾ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ ನಡೆಸಿದೆ. ಸಂಗ್ರಹಿಸಿದ ಗೋಲ್ ಗಪ್ಪಾ ಮಾದರಿಗಳನ್ನು ಇದೀಗ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದ್ದು, ಕೆಲವೇ ದಿನಗಳಲ್ಲಿ ಬರಲಿದೆ ವರದಿ ದೊರೆಯಲಿದೆ.