ಮುಂಬೈ: ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಜೀವ ಬೆದರಿಕೆ ಹಾಕಿ 5 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದ ತರಕಾರಿ ಮಾರಾಟಗಾರನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು 24 ವರ್ಷದ ಜಮ್ಶೆಡ್ಪುರ ನಿವಾಸಿ ಶೇಖ್ ಹುಸೇನ್ ಶೇಖ್ ಮೌಸಿನ್ ಎಂದು ಗುರುತಿಸಲಾಗಿದೆ. ಈತ ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಹಾಯವಾಣಿಗೆ ಬೆದರಿಕೆಯನ್ನು ಕಳುಹಿಸಿದ್ದ. ಆದರೆ ನಂತರ “ಕ್ಷಮೆಯಾಚನೆ” ಸಂದೇಶ ಕೂಡ ಕಳುಹಿಸಿದ್ದ.