ಬೆಂಗಳೂರು: ಬಸವಣ್ಣನವರ ಧ್ಯೇಯದಂತೆ ನಮ್ಮ ಸರ್ಕಾರ ನಡೆಯುತ್ತಿದ್ದು, ನಮ್ಮ ಸರ್ಕಾರ ಜನ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳನ್ನು ಶುಕ್ರವಾರ(ಆ.15) ಕೊಂಡಾಡಿದ್ದಾರೆ.
ನಗರದ ಮಾಣಿಕ್ ಶಾ ಮೈದಾನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿಗಳು ಜನತೆಯನ್ನುದ್ದೇಶಿಸಿ ಭಾಷಣ ಮಾಡಿದರು.
ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರನ್ನುಎಂದಿಗೂ ಮೆರೆಯಲಾಗದು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಬಲಿದಾನಕ್ಕೆ ಬೆಲೆಕಟ್ಟಲಾಗದು ಎಂದು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು. 5 ಗ್ಯಾರಂಟಿ ಗಳಿಂದ 96 ಸಾವಿರ ಕೋಟಿಗೂ ಹೆಚ್ಚು ಹಣವನ್ನೆ ನೀಡಿದ್ದೇವೆ. ಶಕ್ತಿಯೋಜನೆ ಮಹಿಳೆಯರಿಗೆ ಸಹಾಯಕವಾಗಿದೆ. ಯೋಜನೆಗಾಗಿ 5900 ಹೊಸ ಬಸ್ಸುಗಳನ್ನು ಖರೀದಿ ಮಾಡಿದ್ದೇವೆ. ಮಧ್ಯವರ್ತಿಗಳ ಹಾವಳಿಯಿಲ್ಲದೇ ತಲಾದಾಯ ಹೆಚ್ಚಾಗಿದೆ ಎಂದು ತಿಳಿಸಿದರು