ಬೆಂಗಳೂರು: 5 ಗ್ಯಾರಂಟಿಗಳಿಗೆ ನೀಡಲು ಹಣವಿಲ್ಲದೆ ಕಾಂಗ್ರೆಸ್ ಸರ್ಕಾರ 60 ಲಕ್ಷ ರೇಷನ್ ಕಾರ್ಡ್ ರದ್ದುಪಡಿಸಲು ಹೊರಟಿದೆ ಎಂದು ಪ್ರತಿಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ದೆಹಲಿಗೆ ತೆರಳುವ ಮುನ್ನ ವಿಮಾನ ನಿಲ್ದಾಣದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ 60 ಲಕ್ಷ ರೇಷನ್ ಕಾರ್ಡ್ ರದ್ದುಪಡಿಸಲು ಕಾಂಗ್ರೆಸ್ ಸರ್ಕಾರ ಹೊರಟಿದೆ. ಗ್ಯಾರಂಟಿಗಳಿಗೆ ಕೊಡಲು ಇವರ ಬಳಿ ಹಣವಿಲ್ಲ. ನಮ್ಮ ರೇಷನ್ ಕಾರ್ಡ್ ಕಿತ್ತುಕೊಳ್ಳುತ್ತಿದ್ದಾರೆಂದು ಬಡ ಜನರು ಆತಂಕಕ್ಕೀಡಾಗಿದ್ದಾರೆ. ಈ ವಿಚಾರದಲ್ಲಿ ಎಲ್ಲೆಡೆ ಗೊಂದಲ ಸೃಷ್ಟಿಯಾಗಿದೆ ಎಂದು ಹೇಳಿದರು.
ಗ್ಯಾರಂಟಿಗಳಿಗೆ ನೀಡಲು ಹಣವಿಲ್ಲ. ಹೀಗಾಗಿ ರೇಷನ್ ಕಾರ್ಡ್ ಕಿತ್ತರೆ ಮೂರು ನಾಲ್ಕು ಸಾವಿರ ಕೋಟಿ ರೂಪಾಯಿ ಹಣ ಸಿಗುತ್ತದೆ ಎಂದು ಅದಕ್ಕೆ ಕೈ ಹಾಕಿದ್ದಾರೆ. ಸರ್ಕಾರದ ಆಡಳಿತ ಯಂತ್ರ ಪೂರ್ತಿ ಐಸಿಯುನಲ್ಲಿರುವಂತೆ ಕಾಣುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.