ಚಿತ್ರದುರ್ಗ: ಜಿಲ್ಲಾ ಉದ್ಯಮ ಕೇಂದ್ರ ಯೋಜನೆ ಹಾಗೂ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಉಪಕರಣ ಸರಬರಾಜು ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. . ಸೆಪ್ಟೆಂಬರ್ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.
2024-25ನೇ ಪ್ರಸಕ್ತ ಸಾಲಿಗೆ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಸ್ವ ಉದ್ಯೋಗ ಕೈಗೊಳ್ಳಲು ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಭಾಗದ ಮಹಿಳಾ ಫಲಾನುಭವಿಗಳಿಗೆ ಪ್ರತಿ ಗ್ರಾಮ ಪಂಚಾಯತ್‌ಗೆ ಒಟ್ಟು 02 ಹೊಲಿಗೆ ಯಂತ್ರಗಳು ಹಾಗೂ ಗ್ರಾಮೀಣ ಭಾಗದ ವೃತ್ತಿ ನಿರತ ಕುಶಲಕರ್ಮಿಗಳಿಗೆ ಉಚಿತ ಉಪಕರಣ ಸರಬರಾಜು ಯೋಜನೆಯಡಿ ಪ್ರತಿ ಗ್ರಾಮ ಪಂಚಾಯತ್‌ಗೆ ಒಟ್ಟು 01 ಗಾರೆ ಮತ್ತು 01 ಧೋಭಿ ವೃತ್ತೀಯ ಸುಧಾರಿತ ಉಪಕರಣಗಳನ್ನು ಉಚಿತವಾಗಿ ವಿತರಿಸಲು ಗ್ರಾಮಾಂತರ ಕೈಗಾರಿಕೆ ಕಚೇರಿಯಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಫಲಾನುಭವಿಗಳನ್ನು ಸಂಬAಧಿಸಿದ ಗ್ರಾಮ ಪಂಚಾಯತಿಗಳ ಗ್ರಾಮ ಸಭೆಯ ಮೂಲಕ ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳನ್ನು ಸಂಪರ್ಕಿಸಬಹುದು ಎಂದು ಗ್ರಾಮಾಂತರ ಕೈಗಾರಿಕಾ ವಿಭಾಗದ ಉಪನಿರ್ದೇಶಕರು ತಿಳಿಸಿದ್ದಾ