ಗ್ರಾಮ ಆಡಳಿತಾಧಿಕಾರಿಗಳ ಹುದ್ದೆ:  ಅ.26, 27 ರಂದು ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರು ಈ ನಿಯಮ ಕಡ್ಡಾಯ.!

WhatsApp
Telegram
Facebook
Twitter
LinkedIn

 

  ದಾವಣಗೆರೆ :ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ಅಕ್ಟೋಬರ್ 26, 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ಕಟ್ಟುನಿಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಅವರು ಗುರುವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಅ.26 ರಂದು 5 ಕೇಂದ್ರಗಳಲ್ಲಿ ಮತ್ತು ಅ.27 ರಂದು 38 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು.

ಅ.26 ರಂದು 5 ಪರೀಕ್ಷಾ ಕೇಂದ್ರಗಳಲ್ಲಿ 2090 ಅಭ್ಯರ್ಥಿಗಳು, ಅ.27 ರಂದು 17920 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅ.26 ರಂದು ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಕಡ್ಡಾಯ ಕನ್ನಡ ಭಾμÉ ಅ.27 ರಂದು ಬೆಳಿಗ್ಗೆ 10-30ರಿಂದ 12.30ರವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 2-30ರಿಂದ ಸಂಜೆ 4.30 ರವರೆಗೆ ಪತ್ರಿಕೆ-2ರ ಪರೀಕ್ಷೆಗಳು ನಡೆಯಲಿವೆ ಎಂದು ಅವರು ತಿಳಿಸಿದರು.

ಕೇಂದ್ರದೊಳಗೆ  ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಪೂನ್ ಇನ್ನಿತರ ಉಪಕರಣ ಬಳಸದಂತೆ ನಿಗಾವಹಿಸಬೇಕು. ಪರೀಕ್ಷಾ ಹಿಂದಿನ ದಿನ ಸಿಸಿಟಿವಿ ಕ್ಯಾಮರಾ, ಕೇಂದ್ರದೊಳಗೆ ಪ್ರವೇಶ ಮಾಡುವಾಗ ಸಂಪೂರ್ಣ ತಪಾಸಣೆ ಮಾಡಿ ಭಾವಚಿತ್ರಗಳನ್ನು ಮೂಲ ದಾಖಲೆಗಳೊಂದಿಗೆ ಪರೀಕ್ಷೆ ಮಾಡಲು ಸೂಚಿಸಿ  ಪ್ರಶ್ನೆ ಪತ್ರಿಕೆಯನ್ನು ಅಭ್ಯರ್ಥಿಗಳಿಗೆ ನೀಡುವಾಗ ಮತ್ತು ಉತ್ತರ ಪತ್ರಿಕೆ ವಾಪಾಸ್ ಪಡೆಯುವುದನ್ನು ಹಾಗೂ ಖಜಾನೆ ಕಳುಹಿಸುತ್ತಿರುವ ಕುರಿತು ವಿಡಿಯೋ ಮಾಡಬೇಕೆಂದರು.

ಪರೀಕ್ಷಾ ಕೊಠಡಿಗಳಲ್ಲಿ ಸಾಕಷ್ಟು ಗಾಳಿ ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮ ವಹಿಸಬೇಕು. ಪರೀಕ್ಷೆಗಳಲ್ಲಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು. ಪುರುಷ ಅಭ್ಯರ್ಥಿಗಳು ಪೂರ್ಣ ತೊಳಿನ ಶರ್ಟ್ ಧರಿಸಬಾರದು, ಮಹಿಳೆಯರು ಮಂಗಲ್ಯಸರವನ್ನು ಬಿಟ್ಟು ಬೇರೆ ಯಾವುದೇ ರೀತಿಯ ಆಭರಣಗಳನ್ನು ಧರಿಸಬಾರದು. ಕಿವಿಯಲ್ಲಿ ಹೇರ್ ಪೆÇೀನ್‍ಗಳ ಹಾಕಿರುವುದನ್ನು ಪರೀಕ್ಷಿಸುವಂತೆ ಜಿಲ್ಲಾ ಆರೋಗ್ಯಧಿಕಾರಿಗಳಿಗೆ ಸೂಚಿಸಿದರು. ಯಾವುದೇ ಕಾರಣಕ್ಕೂ ತಮಗೆ ವಹಿಸಿದ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.

ಅಭ್ಯರ್ಥಿಗಳ ಆಧಾರ್ ಕಾರ್ಡ್ ತಪಾಸಣೆ ನಡೆಸಿ ಖಚಿತಪಡಿಸಿಕೊಳ್ಳಬೇಕು. ಮೊಬೈಲ್, ಕ್ಯಾಲಕುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸದೇ ಇರುವುದು ಖಚಿತ ಪಡಿಸಿಕೊಳ್ಳಬೇಕು ಪರೀಕ್ಷಾ ಕೇಂದ್ರಗಳಲ್ಲಿ ಅಧಿಕೃತವಾಗಿ ನೇಮಕವಾದ ಸಿಬ್ಬಂದಿಗಳಿಗೆ ಮಾತ್ರ ಕರ್ತವ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಅವರು ಗುರುತಿನ ಚೀಟಿ ಹೊಂದಿರಬೇಕು. ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಉಪವಿಭಾಗಾಧಿಕಾರಿ ಸಂತೋμï ಪಾಟೀಲ್ ಹೆಚ್ಚುವರಿ ಪೆÇಲೀಸ್ ಅಧೀಕ್ಷಕರಾದ  ಮಂಜುನಾಥ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ, ಮಾರ್ಗಾಧಿಕಾರಿಗಳು, ಅಧೀಕ್ಷಕರು, ಸ್ಥಾನಿಕ ನಿರೀಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ವೀಕ್ಷಕರು ಉಪಸ್ಥಿತರಿದ್ದರು.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon