ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮ ಪಂಚಾಯತ್ ಮೂಲಕ ಅನುಷ್ಥಾನ ಮಾಡುತ್ತಿರುವ ಎಲ್ಲಾ ಯೋಜನೆಗಳ ಮಾಹಿತಿ ಮತ್ತು ಕುಂದು ಕೊರತೆಗಳನ್ನು ತಿಳಿಯಲು ಹೊಸ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ.
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯಾವುದೇ ಮಾಹಿತಿ ಮತ್ತು ಕುಂದು ಕೊರತೆಗಾಗಿ ಏಕೀಕೃತ ಸಹಾಯವಾಣಿ ಸಂಖ್ಯೆ: ಸಹಾಯವಾಣಿ ಸಂಖ್ಯೆ – “8277506000”
ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಯಾವೆಲ್ಲ ಮಾಹಿತಿ ಪಡೆಯಬಹುದು?
1) ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ಯೋಜನೆಗಳ ಮಾಹಿತಿಯನ್ನು ತಿಳಿಯಲು ಈ ನಂಬರ್ ಗೆ ಕರೆ ಮಾಡಬಹುದು.
2) ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸಕ್ಕೆ ಬೇಡಿಕೆ ಸಲ್ಲಿಸಬಹುದು.
3) ನಿಮ್ಮೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ ಈ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದು.
4) ನಿಮಗೆ ಆಸ್ತಿ ತೆರಿಗೆ ಕಟ್ಟುವ ಬಗ್ಗೆ ಮಾಹಿತಿಯನ್ನು ಸಹ ಕರೆ ಮಾಡಿ ತಿಳಿಯಬಹುದು.
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈ 8277506000 ಸಹಾಯವಾಣಿಗೆ ಬೆಳಿಗ್ಗೆ 06-00 ಗಂಟೆಯಿಂದ ರಾತ್ರಿ 10-00 ಗಂಟೆಯ ವರೆಗೆ ಕರೆ ಮಾಡಬಹುದು.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.