ರಷ್ಯಾ: ಚಂದ್ರ ಬಳಿ ಕಳುಹಿಸಿರುವ ರಷ್ಯಾದ ಲೂನಾ-25 ಬಾಹ್ಯಾಕಾಶ ನೌಕೆಯುಚಂದ್ರನ ಕಕ್ಷೆ ಪ್ರವೇಶಿಸಿದ ನಂತರ ಚಂದ್ರನ ಮೇಲ್ಮೈನ ಸೆರೆಹಿಡಿದ ಮೊದಲ ಚಿತ್ರವನ್ನು ಕಳುಹಿಸಿದೆ. ಈ ಕುರಿತು ರಷ್ಯಾದ ಬಾಹ್ಯಾಕಾಶ ಸಂಸ್ಥೆ ರಾಸ್ಕೋಸ್ಮಾಸ್ ಮಾಹಿತಿ ಹಂಚಿಕೊಂಡಿದೆ.
ಚಂದ್ರನ ದಕ್ಷಿಣ ಧ್ರುವದಲ್ಲಿ ಝೀಮನ್ ಕುಳಿ ಚಿತ್ರವನ್ನು ತೆಗೆಯಲಾಗಿದೆ. ‘ಡಾರ್ಕ್ ಸೈಡ್’ ಎಂದೂ ಕರೆಯಲ್ಪಡುವ ಈ ಭಾಗವು ಚಂದ್ರನ ಅರ್ಧಗೋಳವಾಗಿದ್ದು, ಭೂಮಿಯ ನೋಟದಿಂದ ಶಾಶ್ವತವಾಗಿ ಮರೆಯಾಗಿದೆ.
ಭೂಮಿಯಿಂದ ಅಗೋಚರವಾಗಿರುವ ಝೀಮಾನ್ ಕುಳಿಯು ಒಂದು ವಿಶಿಷ್ಟವಾದ ಚಂದ್ರನ ಮೇಲ್ಮೈ ಅದು ವಿಶ್ವಾದ್ಯಂತ ಸಂಶೋಧಕರ ಆಸಕ್ತಿಯನ್ನು ಕೆರಳಿಸಿದೆ.
ಸೋವಿಯತ್ ಒಕ್ಕೂಟದ ಲೂನಾ-3 ಬಾಹ್ಯಾಕಾಶ ನೌಕೆಯು ಅಕ್ಟೋಬರ್ 1959 ರಲ್ಲಿ ಚಂದ್ರನ ಮೇಲ್ಮೈನ ಚಿತ್ರವನ್ನು ವಿಶ್ವದಲ್ಲೇ ಮೊದಲ ಬಾರಿಗೆ ರವಾನಿಸಿತ್ತು.
ಭಾರತದ ಚಂದ್ರಯಾನ-3 ಗಿಂತ ಮೊದಲು ಚಂದ್ರನ ದಕ್ಷಿಣ ಧ್ರುವ ಪ್ರದೇಶವನ್ನು ಸ್ಪರ್ಶಿಸುವ ಮೊದಲ ನೌಕೆ ಆಗಬಹುದಾದ ರಷ್ಯಾದ ಬಾಹ್ಯಾಕಾಶ ನೌಕೆಯ ಲ್ಯಾಂಡಿಂಗ್‌ನ ಮೇಲೆ ಈಗ ಎಲ್ಲರ ದೃಷ್ಟಿ ನೆಟ್ಟಿದೆ.