ನವದೆಹಲಿ: ಮಲ ಹೊರುವ ಪದ್ಧತಿಯಲ್ಲಿ ತೊಡಗಿಸಿಕೊಂಡಿರುವವರ ಅನುಕೂಲಕ್ಕಾಗಿ ಹಲವು ನಿರ್ದೇಶನಗಳನ್ನು ನೀಡಿರುವ ಸುಪ್ರೀಂ ಕೋರ್ಟ್, ಚರಂಡಿ ಸ್ವಚ್ಛಗೊಳಿಸುವ ವೇಳೆ ಮೃತಪಟ್ಟವರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಪರಿಹಾರ ನೀಡುವಂತೆಯೂ ಆದೇಶ ನೀಡಿದೆ.
ದೀರ್ಘಕಾಲದಿಂದ ಅಮಾ ನವೀಯ ಸ್ಥಿತಿಯಲ್ಲಿ ಬದುಕುತ್ತಿರುವ ಮಲ ಹೊರುವವರ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಸರ್ವೋಚ್ಚ ನ್ಯಾಯಾ ಲಯ, ದೇಶದಿಂದ ಈ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಸೂಚಿಸಿದೆ.
ಇನ್ನು ಮಲ ಹೊರುವ ಪದ್ಧತಿ ವಿರುದ್ಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿ ಶುಕ್ರವಾರ ತೀರ್ಪು ನೀಡಿದ ನ್ಯಾ| ಎಸ್.ರವೀಂದ್ರ ಭಟ್ ಮತ್ತು ನ್ಯಾ| ಅರವಿಂದ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ.