ಚಿಕ್ಕಬಳ್ಳಾಪುರ : ಬೆಳ್ಳಂಬೆಳಗ್ಗೆ ಭೀಕರ ಅಪಘಾತ 6 ಜನ ಸ್ಥಳದಲ್ಲೇ ಸಾವು..!

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಹೊರಹೊಲಯದ ರಾಷ್ಟ್ರೀಯ ಹೆದ್ದಾರಿ ೪೪ ರ ಚಿತ್ರಾವತಿ ಬಳಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ನಡೆದಿದೆ. ರಸ್ತೆ ಪಕ್ಕ ನಿಂತಿದ್ದ ಸಿಮೆಂಟ್ ಬಲ್ಕರ್ ಗೆ ಟಾಟಾ ಸುಮೋ ಡಿಕ್ಕಿ ಹೊಡೆದು ಸ್ಥಳದಲ್ಲೆ 6 ಜನ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಟಾಟಾ ಸುಮೋದಲ್ಲಿದ್ದವರು. ಮೃತರ ವಿವರ ಇನ್ನೂ ಪತ್ತೆಯಾಗಿಲ್ಲ. ಆಂಧ್ರಪ್ರದೇಶದಿಂದ ಬೆಂಗಳೂರಿನತ್ತ ತೆರಳುವ ವೇಳೆ ಈ ದುರ್ಘಟನೆ ನಡೆದಿದ್ದು, ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಘಟನೆಯಲ್ಲಿ 4 ಜನರಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement