ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಮೈಲಾರಿಗೇಶ್ವರ ಸ್ವಾಮಿಯ ಕಾರ್ಣಿಕ ಏನಪ್ಪ ಅಂದ್ರೆ “ಇಟ್ಟ ರಾಮನ ಬಾಣ ಹುಸಿಯಿಲ್ಲ.” ಸುರರು ಅಸೂರರು ಕಾದಾಡಿದರು. ಭಕ್ತ ಕೋಟಿಗೆ ಮಂಗಳವಾಯಿತು.. ಸರ್ವರು ಎಚ್ಚರದಿಂದರಬೇಕು ಪರಾಕ್”ಎಂದು ಕಾರ್ಣಿಕ ನುಡಿದಿದೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರಿನ ಸ್ವರಸ್ವತಿಪುರಣನಲ್ಲಿ ನೆಲೆಸಿರುವ ಇತಿಹಾಸ ಪ್ರಸಿದ್ಧ ಶ್ರೀ ಮೈಲಾರಲಿಂಗಸ್ವಾಮಿಯ ಕಾರ್ಣಿಕವನ್ನು ಗೊರವಯ್ಯಾ ದಶರಥ ಪೂಜಾರ್ ಅವರು ಮುಂಜಾನೆ 4.45ಕ್ಕೆ ನುಡಿದಿದ್ದಾರೆ. ರಾತ್ರಿಯಿಂದ ಬೆಳಗಿನ ಜಾವದವರೆಗೆ ಹೂವಿನ ಪಲಕ್ಕಿಯೊಂದಿಗೆ ಮೈಲಾರಲಿಂಗ ಸ್ವಾಮಿಯ ಮೆರವಣಿಗೆ ನಡೆಯಿತು. ಕಾರ್ಣಿಕ ಬಗ್ಗೆ ಯಾವುದಕ್ಕೆ ಸಂಬಂಧಿಸಿದ್ದು ಎಂದು ಜನರಲ್ಲಿ ಚರ್ಚೆ ಶುರುವಾಗಿದೆ.