ಬೆಂಗಳೂರು: ಚಿಕ್ಕಮಗಳೂರಿನಲ್ಲಿ ನಡೆಯುತ್ತಿರುವ ಲಾಯರ್ v/s ಪೊಲೀಸ್ ನಡುವಿನ ಘರ್ಷಣೆ ಸಿಐಡಿ ರಾಜ್ಯ ಸರಕಾರ ವಹಿಸಿದೆ. ಈ ನಡುವೆ ಕೆಲವು ವಕೀಲರ ಪೊಲೀಸರು ದಾಖಲಿಸಿರುವ ಎಫ್ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಚಿಕ್ಕಮಗಳೂರು ಟೌನ್ ಠಾಣಾ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಚಿಕ್ಕಮಗಳೂರಿನ ವಕೀಲರಾದ ಡಿ ಬಿ ಸುಜೇಂದ್ರ, ಎ ಕೆ ಭುವನೇಶ್, ಕೆ ಬಿ ನಂದೀಶ್ ಮತ್ತು ಎಚ್ ಎಂ ಸುಧಾಕರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಹೇಮಂತ್ ಚಂದನ್‌ಗೌಡರ್ ಅವರ ನೇತೃತ್ವದ ಏಕಸದಸ್ಯ ಪೀಠ ನಡೆಸಿತು.
ಚಿಕ್ಕಮಗಳೂರಿನಲ್ಲಿ ಪೊಲೀಸರಿಂದ ಹಲ್ಲೆಗೊಳಗಾಗಿರುವ ವಕೀಲ ಎನ್ ಟಿ ಪ್ರೀತಮ್ ಅವರ ವಿರುದ್ಧ ಪೊಲೀಸರು ದಾಖಲಿಸಿಕೊಂಡಿರುವ ಈ ಪ್ರತಿ ದೂರಿಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಟೌನ್ ಠಾಣಾ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿರುವ ಹೈಕೋರ್ಟ್, ಎಫ್‌ಐಆರ್‌ಗೆ ತಡೆ ನೀಡಿದೆ.