ಚಿತ್ರದುರ್ಗ: ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ದಾಳಿ ಮಾಡಲಾಗಿದೆ.
ಮಾಜಿ ಅಕೌಂಟೆಂಟ್ ಸುಶೀಲಮ್ಮ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ವರ್ಷದ ಹಿಂದೆ ವಿ.ಆರ್.ಎಸ್. ಪಡೆದಿದ್ದ ಅಕೌಂಟೆಂಟ್ ಸುಶೀಲಮ್ಮ ಅವರ ಚಿತ್ರದುರ್ಗದ ಮೇದೇಹಳ್ಳಿ ಬಡಾವಣೆಯ ಮನೆ ಮತ್ತು ಹಿರಿಯೂರು ತಾಲೂಕಿನ ಯಾದಲಘಟ್ಟ ಗ್ರಾಮದ ತೋಟದ ಮನೆಯ ಮೇಲೆ ದಾಳಿ ನಡೆಸಲಾಗಿದೆ.
ಸುಶೀಲಮ್ಮ ಅಕೌಂಟೆಂಟ್ ಆಗಿದ್ದ ವೇಳೆ ಭ್ರಷ್ಟಾಚಾರ ನಡೆಸಿದ ಆರೋಪ ಕೇಳಿ ಬಂದಿದೆ. ಆದಾಯ ಮೀರಿ ಹಣ, ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಮನೆಯಲ್ಲಿ ಆಸ್ತಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಲಾಗಿದೆ.
































