ಬೆಂಗಳೂರು: ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅವರು ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾರೆ. 1985ರಲ್ಲಿ ಮೊದಲ ಬಾರಿಗೆ ಶಿರಾ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ ರಾಜ್ಯ ರಾಜಕಾರಣ ಬಿಟ್ಟು ರಾಷ್ಟ್ರ ರಾಜಕಾರಣದತ್ತ ಮುಖ ಮಾಡಿದ ಅವರು, 1989, 1991 ಹಾಗೂ 1998ರಲ್ಲಿ ಚಿತ್ರದುರ್ಗದಿಂದ ಸಂಸದರಾಗಿ ಆಯ್ಕೆಯಾಗಿದ್ದರು.