ಚಿತ್ರದುರ್ಗ: ಶುಕ್ರವಾರ ಸಂಜೆ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 42.8ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-2ರಲ್ಲಿ 9.2ಮಿ.ಮೀ, ಭರಮಸಾಗರದಲ್ಲಿ 4.4ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 30.4ಮಿ.ಮೀ, ಬಾಗೂರಿನಲ್ಲಿ 5.5 ಮಿ.ಮೀ, ಮಾಡದಕೆರೆಯಲ್ಲಿ 13 ಮಿ.ಮೀ, ಮತ್ತೋಡಿನಲ್ಲಿ 3.2ಮಿ.ಮೀ ಹಾಗೂ ಶ್ರೀರಾಂಪುರದಲ್ಲಿ 5.2 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 19.2 ಮಿ.ಮೀ, ರಾಮಗಿರಿಯಲ್ಲಿ 8.4ಮಿ.ಮೀ, ಚಿಕ್ಕಜಾಜೂರಿನಲ್ಲಿ 41.2 ಮಿ.ಮೀ, ಹೆಚ್.ಡಿ.ಪುರದಲ್ಲಿ 36.2ಮಿ.ಮೀ, ತಾಳ್ಯದಲ್ಲಿ 4.2ಮಿ.ಮೀ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಇಕ್ಕನೂರಿನಲ್ಲಿ 22.4ಮಿ.ಮೀ, ಈಶ್ವರಗೆರೆಯಲ್ಲಿ 5.8 ಮಿ.ಮೀ ಮಳೆಯಾಗಿದೆ.
8 ಮನೆಗಳು ಭಾಗಶಃ ಹಾನಿ: ಶುಕ್ರವಾರ ರಾತ್ರಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ ಭಾಗಶಃ 8 ಮನೆಗಳು ಹಾಗೂ 0.54 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 1 ಭಾಗಶಃ ಮನೆಹಾನಿಯಾಗಿದೆ. ಹೊಸದುರ್ಗ ತಾಲ್ಲೂಕಿನಲ್ಲಿ 2 ಮನೆಗಳು ಭಾಗಶಃ ಹಾನಿಯಾಗಿವೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ ಭಾಗಶಃ 1 ಮನೆ ಹಾಗೂ 0.14 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಹಿರಿಯೂರು ತಾಲ್ಲೂಕಿನಲ್ಲಿ ಭಾಗಶಃ 4 ಮನೆ ಮತ್ತು 0.40 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.