ಬೆಂಗಳೂರು : ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ಅವರ ಮಲಮಗಳು ನಟಿ ರನ್ಯಾ ರಾವ್ ಅವರನ್ನು ಬಂಧಿಸಿದ ನಂತರ ರಾವ್ ಅವರನ್ನು ರಜೆಯ ಮೇಲೆ ಕಳುಹಿಸಲಾಗಿತ್ತು.
ಈಗ ಕರ್ನಾಟಕ ಸರ್ಕಾರ ಸೋಮವಾರ ಹಿರಿಯ ಐಪಿಎಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ಅವರ ಕಡ್ಡಾಯ ರಜೆಯನ್ನು ರದ್ದುಗೊಳಿಸಿ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ ಮಾಡಿದೆ.
ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಹಿನ್ನೆಲೆ ಸ್ಯಾಂಡಲ್ ವುಡ್ ನಟಿ ರನ್ಯಾರಾವ್ ರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು.ದುಬೈನಿಂದ ಅಕ್ರಮ ಚಿನ್ನ ಸಾಗಾಟ ಮಾಡಿ ಕೆಂಪೇಗೌಡ ಅಂತರಾಷ್ಟ್ರೀಯ ಏರ್ ಪೋರ್ಟ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ನಟ ಗಣೇಶ್ ಅಭಿನಯದ ಪಟಾಕಿ ಹಾಗೂ ಸುದೀಪ್ ಜೊತೆ ಮಾಣಿಕ್ಯ ಚಿತ್ರದಲ್ಲಿ ಮಾನಸಾ ಪಾತ್ರ ಮಾಡಿದ್ದರು. ಅಲ್ಲದೇ ತಮಿಳಿನ ಸಿನಿಮಾ ಒಂದರಲ್ಲಿ ರನ್ಯಾರಾವ್ ಕಾಣಿಸಿಕೊಂಡಿದ್ದರು ಎಂಬುದು ವಿಶೇಷ.!