ಚೀನಾ: ಜಿಯಾಂಗ್ಲಿ ಪ್ರಾಂತ್ಯದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಜಿನ್ಯು ನಗರದ ಶಾಪಿಂಗ್ ಕಾಂಪ್ಲೆಕ್ಸ್ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 39 ಜನರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.
ಇತರ 9 ಮಂದಿ ಗಾಯಗೊಂಡಿದ್ದಾರೆ. ಸೂಕ್ತ ಸುರಕ್ಷತಾ ವ್ಯವಸ್ಥೆ ಇಲ್ಲದಿರುವುದೇ ಈ ಘಟನೆಗೆ ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದ್ದು, ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ.