ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದೆ. ಮತದಾನದ ದಿನವಾದ ಇಂದು ಬೆಳಗ್ಗೆ ರಾಹುಲ್ ಗಾಂಧಿ ಎಕ್ಸ್ ನಲ್ಲಿ , ಉಚಿತ ಚಿಕಿತ್ಸೆ, ಕಡಿಮೆ ದರದಲ್ಲಿ ಸಿಲಿಂಡರ್, ಇಂಗ್ಲಿಷ್ ಶಿಕ್ಷಣ, ಹಳೆ ಪಿಂಚಣಿ ವ್ಯವಸ್ಥೆ ಜಾರಿ ಸೇರಿ ಹಲವು ಯೋಜನೆಗಳಿಗಾಗಿ ಕಾಂಗ್ರೆಸ್ ಗೆ ಮತದಾನ ಮಾಡುವಂತೆ ಅವರು ಮನವಿ ಮಾಡಿದ್ದರು.
ಈ ನಿಟ್ಟಿನಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ರಾಹುಲ್ ಗಾಂಧಿ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ರಾಹುಲ್ ಗಾಂಧಿ ಮಾಡಿದ ಪೋಸ್ಟ್ ಡಿಲಿಟ್ ಮಾಡಬೇಕು. ಅವರ ಖಾತೆಯನ್ನು ಅಮಾನತು ಮಾಡಬೇಕು ಹಾಗೂ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಬಿಜೆಪಿ ಆಗ್ರಹಿಸಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲು ಮತ್ತು ಕ್ರಿಮಿನಲ್ ಮೊಕದ್ದಮೆ ಹಾಕಲು ರಾಜಸ್ಥಾನದ ಮುಖ್ಯ ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡುವಂತೆ ಬಿಜೆಪಿ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.