ಇತ್ತೀಚಿನ ಚುನಾವಣಾ ಸಮೀಕ್ಷೆಯಲ್ಲಿ ಬ್ರಿಟನ್ನಲ್ಲಿ ಆಡಳಿತಾರೂಢ ಸರ್ಕಾರಕ್ಕೆ ಶಾಕ್ ಎದುರಾಗಿದೆ.
ಇದೀಗ ಸಾರ್ವತ್ರಿಕ ಚುನಾವಣೆಗಳು ನಡೆದರೆ ಭಾರತೀಯ ಮೂಲದ ರಿಷಿ ಸುನಕ್ ಮತ್ತು ಅವರ ಸಂಪುಟದ ಅರ್ಧಕ್ಕಿಂತ ಹೆಚ್ಚು ಸಚಿವರು ಸೋಲುತ್ತಾರೆ ಎಂದು ಪ್ರಾಥಮಿಕ ಸಮೀಕ್ಷೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷವು 100 ಸಂಸದೀಯ ಸ್ಥಾನಗಳನ್ನು ಪಡೆಯುವುದಿಲ್ಲ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ.
ವಿರೋಧ ಪಕ್ಷ ಲೇಬರ್ ಪಾರ್ಟಿ 468 ಸ್ಮಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ಸಮೀಕ್ಷೆಯಲ್ಲಿ ದಾಖಲಾಗಿದೆ.