ಚೆನ್ನೈ ನಲ್ಲಿ ವೈದ್ಯನಿಗೆ ರೋಗಿಯ ಮಗ ಚಾಕುವಿನಿಂದ ಇರಿದ ಪ್ರಕರಣದ ಬೆನ್ನಲ್ಲೇ ಮತ್ತೊಬ್ಬ ವೈದ್ಯರ ಮೇಲೆ ರೋಗಿ ಹಲ್ಲೆ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಚೆನ್ನೈನ ಸರ್ಕಾರಿ ಸ್ಟಾನ್ಲಿ ಆಸ್ಪತ್ರೆಯ ಡಾ. ಹರಿಹರನ್ ಮೇಲೆ ಬುಧವಾರ ಬೆಳಗ್ಗೆ ಒಪಿಡಿಯಲ್ಲಿ ರೋಗಿ ಹಲ್ಲೆ ಮಾಡಲು ಯತ್ನಿಸಿದ್ದಾನೆ.
ಇದರಿಂದ ವೈದ್ಯರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ವೈದ್ಯರ ಮೇಲಿನ ಹಲ್ಲೆ ಸಂಬಂಧ ಆಸ್ಪತ್ರೆಯ ಅಧಿಕಾರಿಗಳು ನೀಡಿದ ದೂರಿನ ಅನ್ವಯ ಆರೋಪಿ ಭರತ್ ನನ್ನು ಪೊಲೀಸರು ಬಂಧಿಸಿದ್ದಾರೆ.