ಬೆಂಗಳೂರು: ಉದ್ಯಮಿಗೆ ಕೋಟ್ಯಾಂತರ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿದಂತೆ ಏಳು ಮಂದಿ ಆರೋಪಿಗಳ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದೆ.
ಈ ಹಿನ್ನೆಲೆಯಲ್ಲಿ ಎಲ್ಲ ಆರೋಪಿಗಳನ್ನು ಸಿಸಿಬಿ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಚೈತ್ರಾ ಜತೆಗೆ ಗಗನ್ ಕಡೂರು, ರಮೇಶ್, ಚೆನ್ನನಾಯ್ಕ್, ಧನರಾಜ್ ಹಾಗೂ ಶ್ರೀಕಾಂತ್‌ನ್ನು ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಭಿನವ ಹಾಲಶ್ರೀ ಹೊರತುಪಡಿಸಿ ಎಲ್ಲಾ ಬಂಧಿತ ಆರೋಪಿಗಳು ಕೋರ್ಟ್ ಮುಂದೆ ಹಾಜರಾಗಲಿದ್ದಾರೆ.