ಬೆಂಗಳೂರು: ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಕೋಟ್ಯಾಂತರ ರೂ. ವಂಚನೆ ಎಸಗಿದ ಪ್ರಕರಣದಲ್ಲಿ 3ನೇ ಆರೋಪಿ ಆಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿಯ ಹಾಲುಶ್ರೀ ಮಠದ ಅಭಿನವ ಹಾಲವೀರಪ್ಪಶ್ರೀ ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ತಿಳಿದು ಬಂದಿದೆ.
ಹಾಲುಶ್ರೀ ಮಠದ ಅಭಿನವ ಹಾಲವೀರಪ್ಪಶ್ರೀ ಪರ ವಕೀಲರು ನಗರದ 57ನೆ ಸಿಸಿಹೆಚ್ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಈ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಇನ್ನು ವಂಚನೆ ಪ್ರಕರಣದಲ್ಲಿ ಹೆಸರು ಕೇಳಿಬಂದ ಬೆನ್ನಲ್ಲೇ ಹಾಲಶ್ರೀ ನಾಪತ್ತೆಯಾಗಿದ್ದು, ಅಜ್ಞಾತ ಸ್ಥಳದಲ್ಲಿ ಅಡಗಿದ್ದು ಅವರ ಪತ್ತೆಗೆ ಸಿಸಿಬಿ ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಪೊಲೀಸರ ವಶದಲ್ಲಿದ್ದು ವಿಚಾರಣೆ ನಡೆಯುತ್ತಿದೆ.