ಛತ್ತೀಸ್ ಗಢ: ಛತ್ತೀಸ್ ಗಢದ ಬಿಜಾಪುರದಲ್ಲಿ ನಡೆದ ಭದ್ರತಾ ಎನ್‌ಕೌಂಟರ್‌ನಲ್ಲಿ ಹತರಾದ ನಕ್ಸಲರ ಸಾವಿನ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ.
ಭದ್ರತಾ ಎನ್‌ಕೌಂಟರ್ 8 ಗಂಟೆಗಳ ಕಾಲ ನಡೆದಿತ್ತು. ಈ ಎನ್‌ಕೌಂಟರ್‌ನಲ್ಲಿ ಹತರಾದ ಮೂರು ಮಂದಿ ನಕ್ಸಲರ ಮೃತದೇಹವನ್ನು ಇಂದು ಬೆಳಗ್ಗೆ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಂಗಳವಾರ ಬೆಳಗ್ಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಲೆಂಡಾ ಗ್ರಾಮದ ಅರಣ್ಯದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಎನ್‌ಕೌಂಟರ್ ನಡೆದಿದೆ. ಇಂದು ಬೆಳಗ್ಗಿನ ಜಾವ ಒಟ್ಟು 13 ಮೃತದೇಹಗಳನ್ನು ಸಿಬ್ಬಂದಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಈ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯಪಡೆ, ಕೇಂದ್ರೀಯ ಮೀಸಲು ಪೊಲೀಸ್ ಪಡೆ, ಮತ್ತು ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ ಸಿಬ್ಬಂದಿಗಳು ಭಾಗಿಯಾಗಿದ್ದಾರೆ.